S Muniraju

ಓಂ ಶ್ರೀ ವೆಂಕಟೇಶ್ವರಾಯ ನಮಃ |
ಓಂ ಲಕ್ಷ್ಮೀಪತಯೇ ನಮಃ |

ವಿವಿಧ ಮಂತ್ರಘೋಷಗಳ ನಡುವೆ ಅದ್ಧೂರಿಯಾಗಿ ನೆರವೇರಿದ ಜಗತ್ ರಕ್ಷಕ, ಲೋಕ ಪಾಲಕ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ. ಗೋವಿಂದನ ನಾಮ ಸ್ಮರಣೆಯಲ್ಲಿ ಮಿಂದೆದ್ದ ಭಕ್ತರು. ದಾಸರಹಳ್ಳಿ ಕ್ಷೇತ್ರದ ಜನತೆಯ ಒಳಿತಿಗಾಗಿ ಹಾಗೂ ಲೋಕ ಕಲ್ಯಾಣಕ್ಕಾಗಿ ದಾರಸಹಳ್ಳಿಯ ಬಾಗಲಗುಂಟೆಯಲ್ಲಿ ಆಯೋಜಿಸಿದ್ದ ಶ್ರೀನಿವಾಸ ಕಲ್ಯಾಣೋತ್ಸವ ವಿಜೃಂಭಣೆಯಿಂದ, ಯಶಸ್ವಿಯಾಗಿ ನೆರವೇರಿತು. ನೆರೆದಿದ್ದ ಸಾವಿರಾರು ಭಕ್ತರು ವಿಠ್ಠಲನ ದರ್ಶನ ಪಡೆದು ಪುಳಕಿತರಾದರು. ಗಣ್ಯರು ಸೇರಿದಂತೆ ಸಾವಿರಾರು ಮಂದಿ ಕಲ್ಯಾಣೋತ್ಸವವನ್ನು ಕಣ್ತುಂಬಿಕೊಂಡು ಲೋಕಪಾಲಕ ಗೋವಿಂದನ ನಾಮಸ್ಮರಣೆಗೈದು ಶ್ರೀನಿವಾಸನ ಕೃಪೆಗೆ ಪಾತ್ರರಾದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು, ಕ್ಷೇತ್ರದ ಸಮಸ್ತ ಜನತೆಗೆ ತುಂಬು ಹೃದಯದ ಧನ್ಯವಾದಗಳು.